ಚೆಸ್: ಕುಮಾರಿ ಶ್ರುತಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನೆಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕುಂದಾಪುರ ವಿ ಕೆ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರುತಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಈಕೆ ಅಣ್ಣಪ್ಪ ದೇವಾಡಿಗ ಮತ್ತು ಶ್ಯಾಮಲಾ ದೇವಾಡಿಗ ದಂಪತಿಯ ಪುತ್ರಿ.


Share