ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಇದರ ಅದ್ಯಕ್ಷರಾಗಿ ಪಿಯದರ್ಶಿನಿ ದೇವಾಡಿಗ ಬಿಜೂರು ಪದಗ್ರಹಣ

`

ಬೈಂದೂರು : ಬಿಜೆಪಿ ಮಹಿಳಾ ಮೋರ್ಚಾ ಮತ್ತು ಯುವ ಮೋರ್ಚಾ ಬೈಂದೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನಾಗೂರು ಮಹಾಲಸ ಕಲ್ಚರಲ್ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು. ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಕ್ಷ್ಮೀನಾರಾಯಣ, ದೀಪಕ್ ಕುಮಾರ್ ಶೆಟ್ಟಿ, ಬಾಬು ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಪಿಯದರ್ಶಿನಿ, ಸುರೇಶ್ ಶೆಟ್ಟಿ, ಜಿಲ್ಲಾ ಪ. ಸದಸ್ಯರಾದ ಬಾಬು ಹೆಗ್ಡೆ, ಸುರೇಶ್ ಬಟ್ವಾಡಿ, ಶಂಕರ ಪೂಜಾರಿ, ಗೀತಾಂಜಲಿ ಸುವರ್ಣ, ನಯನಾ ಶ್ಯಾನುಭೋಗ್ ,ಜಯಂತಿ ಭಾಸ್ಕರ್ ಪುತ್ರನ್ ಮೊದಲಾದವರು ಉಪಸ್ಥಿತರಿದ್ದರು.

ಅಧ್ಯಕ್ಷ ನಯನಾ ಶ್ಯಾನುಭಾಗ್ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಪಿಯದರ್ಶಿನಿ ಅವರಿಗೆ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಹಾಗೇ ಯುವ ಮೋರ್ಚಾದ ನೂತನ ಅಧ್ಯಕ್ಷರಾದ ಶರತ್ ಶೆಟ್ಟಿ ಅವರಿಗೆ ರಾಘವೇಂದ್ರ ನೆಂಪು ಧ್ವಜ ನೀಡುವ ಮೂಲಕ ಸ್ವಾಗತಿಸಿದರು.


Share