ದೇವಾಡಿಗರ ಸಮಾಜ ಸೇವಾ ಸಂಘ ಕುಂದಾಪುರ - ರಕ್ತದಾನ ಶಿಬಿರ

 

ಕುಂದಾಪುರ: ಇಂದು ಅಪಘಾತ ಮತ್ತಿತರ ತುರ್ತು ಸಂದರ್ಭದಲ್ಲಿ ಜನರ ಜೀವ ಉಳಿಸಲು ರಕ್ತದ ಅಗತ್ಯತೆ ತುಂಬಾ ಇದ್ದು ಈ ರೀತಿ ರಕ್ತದಾನ ಶಿಬಿರವನ್ನು ಮಾಡುವ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಸಾಧ್ಯ ಎಂದು ಮುಂಬೈ ಉದ್ಯಮಿ ಸುರೇಶ್ ಡಿ.ಪಡುಕೋಣೆ ಹೇಳಿದರು.

ಅವರು ದೇವಾಡಿಗರ ಸಮಾಜ ಸೇವಾ ಸಂಘ ಕುಂದಾಪುರ, ಪರಿಸರದ ಇತರ ದೇವಾಡಿಗ ಸೇವಾ ಸಂಘಗಳ ಸಹಕಾರದೊಂದಿಗೆ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಕುಂದಾಪುರ ತಾಲೂಕು ಘಟಕ ಮತ್ತು ರಕ್ತನಿಧಿ ಕೇಂದ್ರ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷರಾದ ನಾರಾಯಣ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಚೆರ್‍ಮೆನ್ ಎಸ್.ಜಯಕರ್ ಶೆಟ್ಟಿ, ಮಣಿಪಾಲ್ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಬಿ.ಜಿ.ಮೋಹನ್ ದಾಸ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ, ವೈದ್ಯರಾದ ಡಾ.ಎಚ್.ಎಸ್.ಮಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ನಾರಾಯಣ ದೇವಾಡಿಗ ಸ್ವಾಗತಿಸಿದರು, ನಾಗಾರಾಜ್ ರಾಯಪ್ಪನ ಮಠ ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ಉದಯ ಹೇರಿಕೇರಿ ವಂದಿಸಿದರು.

ಇದೇ ಸಂದರ್ಭದಲ್ಲಿ 63 ಬಾರಿ ರಕ್ತದಾನ ಮಾಡಿದ ದಿವಾಕರ್ ಗಂಗೊಳ್ಳಿ ಇವರನ್ನು ಗೌರವಿಸಲಾಯಿತು.


Share