ಕಂಬನಿ: ದೇವಾಡಿಗ ಸಂಘ ಮೂಡಬಿದ್ರಿ ಮಾಜಿ ಅಧ್ಯಕ್ಷರಾದ ಶ್ರೀ ರತ್ನಾಕರ್ ದೇವಾಡಿಗ ನಿಧನ (Updated)

ಮೂಡಬಿದ್ರಿ: ಮೂಡಬಿದ್ರಿ ಪುರಸಭೆ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಸಕ್ರಿಯ ರಾಜಕಾರಣಿ, ಸಮಾಜ ಸೇವಕ, ಕೊಡುಗೈ ದಾನಿ, ದೇವಾಡಿಗ ಸಂಘ ಮೂಡಬಿದ್ರಿ ಮಾಜಿ ಅಧ್ಯಕ್ಷರಾದ ಶ್ರೀ ರತ್ನಾಕರ್ ದೇವಾಡಿಗ ಇವತ್ತು ನಿಧನ ಹೊಂದಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ.

ಅವರ ಕುಟುಂಬದವರಿಗೆ ನೋವನ್ನು ಬರಿಸುವ ಶಕ್ತಿ ಕೊಡಲಿ ಹಾಗೂ ದೇವರು ಅವರ ಆತ್ಮಕೆ ಸದ್ಗತಿ ನೀಡಲಿ,

ಮೃತರ ಅಂತ್ಯ ಸಂಸ್ಕಾರ ನಾಳೆ ಜನವರಿ 8, ಸಾಯಂಕಾಲ 4 ಗಂಟೆಗೆ ಮೂಡಬಿದ್ರಿ ಅಲ್ಲಿ ನಡೆಯಲಿದೆ 

#ಓಂಶಾಂತಿ

ಮೂಡುಬಿದಿರೆ ಪುರಸಭಾ ಮಾಜಿ ಅಧ್ಯಕ್ಷ ರತ್ನಾಕರ ದೇವಾಡಿಗ

ಮೂಡುಬಿದಿರೆ, ಜ.7: ಪುರಸಭೆಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಉದ್ಯಮಿ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ರತ್ನಾಕರ ದೇವಾಡಿಗ (53) ಅವರು ಜ.7ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೂರು ಬಾರಿ ಪುರಸಭಾ ಸದಸ್ಯರಾಗಿ, 2010ರಲ್ಲಿ ಅಧ್ಯಕ್ಷರಾಗಿದ್ದ ಅವರು ಘನತ್ಯಾಜ್ಯ ನಿರ್ವಹಣೆ ಘಟಕ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅವರ ಅವಧಿಯಲ್ಲಿ ಪುರಸಭೆಗೆ ಸ್ವಚ್ಛತೆಗಾಗಿ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿತ್ತು.

ಮನೀಶ್‌ ಟ್ರಾವೆಲ್‌ ಏಜೆನ್ಸಿ ನಡೆಸುತ್ತಿದ್ದ ಅವರು ಮನೀಶ್‌ ಬಿಲ್ಡರ್‌ ಆಗಿಯೂ ಗುರುತಿಸಿಕೊಂಡಿದ್ದರು. ಅವರು ಯೂತ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾಗಿದ್ದರು.

ಮೂಡುಬಿದಿರೆ ದೇವಾಡಿಗರ ಸುಧಾರಕ ಸಂಘದ ಅಧ್ಯಕ್ಷರಾಗಿ ಹಾಗೂ ರೋಟರಿ ಕ್ಲಬ್‌ ಮೊದಲಾದ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದರು. ಪುಚ್ಚೇರಿಕಟ್ಟೆಯ ಕಿರಿಯ ಪ್ರಾಥಮಿಕ ಶಾಲೆಯ ಎಸ್‌.ಡಿ.ಎಂ.ಸಿ. ಅಧ್ಯಕ್ಷರಾಗಿ ದಶಕಗಳಿಂದ ಅವರು ಶಾಲಾ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಅಂಗನವಾಡಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದ್ದರು.

ಸಂತಾಪ: ಶಾಸಕ ಉಮಾನಾಥ ಕೋಟ್ಯಾನ್‌, ಮಾಜಿ ಸಚಿವ ಕೆ. ಅಭಯಚಂದ್ರ, ಜಿ.ಪಂ. ಸದಸ್ಯ ಸುಚರಿತ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ., ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಸಹಿತ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.


Share